2018-2019 ಸಾಲಿನ ರಾಜ್ಯ ಬಜೆಟ್ ಮಂಡನೆ; ಕುರಿ, ಮೇಕೆ ಸಾಕಾಣಿಕೆಗೆ ಸಾಲಮನ್ನಾ
ಶುಕ್ರವಾರ, 16 ಫೆಬ್ರವರಿ 2018 (12:24 IST)
ಬೆಂಗಳೂರು: 2018-2019 ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದರು. ಕುರಿ, ಮೇಕೆ ಸಾಕಾಣಿಕೆಗೆ ಸಾಲಮನ್ನಾ. ರಾಜ್ಯದ 16 ಜಿಲ್ಲೆಗಳಲ್ಲಿ ಕುರಿ ರೋಗ ತಪಾಸಣಾ ಕೇಂದ್ರ. ಮಹಿಳಾ ಸುರಕ್ಷತೆಗಾಗಿ 1000 ಬಸ್ ಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ.
ಚಿಕ್ಕಮಗಳೂರಿನಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆ, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್. ರಾಜ್ಯದ 19.60 ಲಕ್ಷ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಿಕೆ.
ತಿರುಮಲದಲ್ಲಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಅತಿಥಿಗೃಹ, 10 ಡಬಲ್ ಡೆಕ್ಕರ್ ಬಸ್ ಖರೀದಿಗೆ ನಿರ್ಧಾರ. 30 ಬಸ್ ನಿಲ್ದಾಣ, 8 ಬಸ್ ಗಳ ಘಟಕ, 325 ಬಸ್ ತಂಗುದಾಣ ಮೇಲ್ಜರ್ಜೆಗೆ ಏರಿಕೆ.
ಲೋಕೋಪಯೋಗಿ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆಗೆ 9271 ಕೋಟಿ, ಇಂಧನ ಇಲಾಖೆಗೆ 14136 ಕೋಟಿ ಅನುದಾನ. ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ