ದೇಶದಲ್ಲಿ ಉದ್ಯೋಗ ಸೃಷ್ಟಿ ಹೆಚ್ಚಿಸಲು ಯಾವ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎನ್ನುವ ವಿತ್ತ ಸಚಿವಾಲಯದ ಪ್ರಶ್ನೆಗೆ, ಶೇ.50 ರಷ್ಟು (7031 ಮತದಾರರು) ಮೈಕ್ರೋ ಸ್ಮಾಲ್ ಮತ್ತು ಮೀಡಿಯಂ ಎಂಟರ್‌ಪ್ರೈಸೆಸ್ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವಂತೆ ಸಲಹೆ ನೀಡಿದ್ದಾರೆ.
ಶೇ.20 ರಷ್ಟು ಜನತೆ ಅಗ್ಗದ ದರದ ಗೃಹ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಿದರೆ, ಶೇ.10 ರಷ್ಟು ಜನತೆ ವಾಹನೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವಂತೆ ಸಲಹೆ ನೀಡಿದ್ದಾರೆ. ಶೇ.8 ರಷ್ಟು ಜನತೆ ಗಾರ್ಮೆಂಟ್ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವಂತೆ ಸಲಹೆ ನೀಡಿದ್ದಾರೆ.