ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ ದೇಶದ ಅತೀ ದೊಡ್ಡ ಕೋವಿಡ್ ಕೇರ್ ಸೆಂಟರ್: ಇಲ್ಲಿನ ವಿಶೇಷತೆ ಏನು ಗೊತ್ತಾ?

ಶುಕ್ರವಾರ, 10 ಜುಲೈ 2020 (09:48 IST)
ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇವೆ. ಇದರ ನಡುವೆ ರೋಗಿಗಳಿಗೆ ಬೆಡ್ ವ್ಯವಸ್ಥೆ ಮಾಡಲು ಸರ್ಕಾರ ಪರದಾಡುತ್ತಿದೆ.


ಇದರ ನಡುವೆಯೇ ಬೆಂಗಳೂರಿನಲ್ಲಿ ದೇಶದ ಅತೀ ದೊಡ್ಡ ಕೋವಿಡ್ ಕೇರ್ ಸೆಂಟರ್ ತೆರೆಯಲು ಸರ್ಕಾರ ಕಾರ್ಯೋನ್ಮುಖವಾಗಿದೆ. ನಿನ್ನೆ ಸಿಎಂ ಯಡಿಯೂರಪ್ಪ ತಮ್ಮ ಸಂಪುಟ ಸಹೋದ್ಯೋಗಿಗಳ ಜತೆ ಇಲ್ಲಿಗೆ ಭೇಟಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.

ಸುಮಾರು 10 ಸಾವಿರ ಬೆಡ್ ಸಾಮರ್ಥ್ಯವುಳ್ಳ ಬೃಹತ್ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುತ್ತಿದ್ದು, ಇಲ್ಲಿ ರೋಗಿಗಳಿಗೆ ಅತ್ಯುತ್ತಮ ಚಿಕಿತ್ಸೆ ಒದಗಿಸಲು 300 ವೈದ್ಯರು, 600 ನರ್ಸ್ ಗಳು ಸೇರಿ  ಸುಮಾರು 2200 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಜತೆಗೆ ರೋಗಿಗಳು ಇಲ್ಲಿ ದಾಖಲಾದಾಗ ಪ್ರತ್ಯೇಕ ಊಟದ ಹಾಲ್ ಜತೆಗೆ ಮನರಂಜನೆಗೂ ವ್ಯವಸ್ಥೆ ಮಾಡಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ