ನವದೆಹಲಿ : ಭಾರತದಲ್ಲಿ ಕೋರೊನಾ ವೈರಸ್ ನಿಯಂತ್ರಿಸಲು ಪ್ರಧಾನಿ ಮೋದಿ ಸರ್ಕಾರ ಶ್ರಮಿಸುತ್ತಿರುವುದನ್ನು ಕಂಡು ಜಗತ್ತಿನ ಶ್ರೀಮಂತ ಉದ್ಯಮಿ, ಮೈಕ್ರೋಸಾಫ್ಟ್ ಸಹ ಸ್ಥಾಪಕ ಬಿಲ್ ಗೇಟ್ಸ್ ಪತ್ರದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಹಾಮಾರಿ ಕೊರೊನಾ ವೈರಸ್ ನಿಂದ ದೇಶದ ಜನರನ್ನು ಪಾರು ಮಾಡಲು ಪ್ರಧಾನಿ ಮೋದಿ ಇಡೀ ಭಾರತವನ್ನೇ ಲಾಕ್ ಡೌನ್ ಮಾಡಿರುವುದು ಸ್ವಾಗತಾರ್ಹ. ಇದರಿಂದ ಸೋಂಕಿತರ ಪತ್ತೆ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಬಿಲ್ ಗೇಟ್ಸ್ ಪತ್ರದ ಮೂಲಕ ತಿಳಿಸಿದ್ದಾರೆ.
ಹಾಗೇ ನೀವು ಕೊರೊನಾ ವಿರುದ್ಧದ ಹೋರಾಟದಲ್ಲಿ ಡಿಜಿಟಲ್ ಮೀಡಿಯಾಗೂ ಮೊದಲ ಆದ್ಯತೆ ನೀಡಿದ್ದೀರಿ. ಕೊರೊನಾ ಸೋಂಕಿತರನ್ನು ಪತ್ತೆ ಹಚ್ಚಲು ಆರೋಗ್ಯ ಸೇತು ಆ್ಯಪ್ ಸಿದ್ದಪಡಿಸಿದ್ದೀರಿ. ನಿಮ್ಮ ಸರ್ಕಾರದ ನಿರ್ಧಾರದಿಂದ ತುಂಬಾ ಸಂತೋಷವಾಗಿದೆ ಎಂದು ಬಿಲ್ ಗೇಟ್ಸ್ ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆ.