ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ : ರಾಜ್ಯ ಸರ್ಕಾರದಿಂದ ಆದೇಶ

ಶನಿವಾರ, 25 ಸೆಪ್ಟಂಬರ್ 2021 (09:11 IST)
ಬೆಂಗಳೂರು : ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದವರಿಗೆ ಪರಿಹಾರ ಧನ ವಿತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಎಂ. ಎಸ್ ಆದೇಶ ಹೊರಡಿಸಿದ್ದು, ಕೊರೊನಾ ಸೋಂಕಿನಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಿಪಿಎಲ್ ಕುಟಂಬಕ್ಕೆ ಆಸರೆ ನೀಡುವ ನಿಟ್ಟಿನಲ್ಲಿ 1 ರೂ ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರದಿಂದ ಅರ್ಹ ಸಂತ್ರಸ್ತ ಕುಟುಂಬದ ವಾರಸುದಾರರಿಗೆ ನೀಡಲು ಸರ್ಕಾರ ಆದೇಶಿಸಿದೆ.
ಅದರಂತೆ ಮುಂದುವರೆರದು, ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದ ಅರ್ಹ ನ್ಯಾಯಬದ್ಧ ವಾರಸುದಾರರಿಗೆ ಕೋವಿಡ್19 ಮರಣ ಪರಿಹಾರ ಧನವನ್ನು ಜಿಲ್ಲಾಧಿಕಾರಿಗಳ ಜಿಲ್ಲಾ ವಿಪತ್ತು ಪರಿಹಾರ ನಿಧಿ ಪಿಡಿ ಖಾತೆಯಿಂದ ಚೆಕ್ ಮೂಲಕ ವಿತರಿಸಲು ಸರ್ಕಾರ ನಿರ್ಧರಿಸಿ ಆದೇಶ ಹೊರಡಿಸಿದೆ. ಪಿಡಿ ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪರಿಹಾರ ಭರಿಸಲು ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ