ಧಾರವಾಡದಲ್ಲಿ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆ; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆ

ಭಾನುವಾರ, 22 ಮಾರ್ಚ್ 2020 (09:56 IST)
ಧಾರವಾಡ : ರಾಜ್ಯದಲ್ಲಿ ಈಗಾಗಲೇ 20 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಇದೀಗ ಧಾರವಾಡ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

33 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಆತನಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತನಿಗೆ ಕೊರೊನಾ ಸೋಂಕು ಇರುವ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ  21ಕ್ಕೆ ಏರಿಕೆಯಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ