ಕೊರೋನಾ ಭಯದಿಂದ ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ

ಸೋಮವಾರ, 23 ಮಾರ್ಚ್ 2020 (09:50 IST)
ಬೆಂಗಳೂರು: ಕೊರೋನಾವೈರಸ್ ಹರಡುವಿಕೆ ತಡೆಯಲು ಸರ್ಕಾರ ನಗರವನ್ನು ಲಾಕ್ ಡೌನ್ ಮಾಡುವ ನಿರ್ಧಾರ ಮಾಡಿದೆ. ಆದರೆ ಇದರಿಂದಾಗಿ ದಿನಗೂಲಿ ಮಾಡುವವರಿಗೆ ತೊಂದರೆಯಾಗುತ್ತಿದೆ.


ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಕೊರೋನಾದಿಂದ ಪ್ರಯಾಣಿಕರಿಲ್ಲದೇ ಆಟೋ ಓಡಿಸಲಾಗದೇ ಹಣಕಾಸಿನ ಮುಗ್ಗಟ್ಟಿನಿಂದಾಗಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಶಿವಕುಮಾರ್ ಎಂಬ ಚಾಲಕ 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಇದೀಗ ಆಟೋ ಓಡಿಸಲೂ ಆಗದೇ ಸಾಲ ತೀರಿಸಲೂ ಆಗದೇ ಸಂಕಷ್ಟಕ್ಕೆ ಸಿಲುಕಿದ್ದ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ