ಬೆಂಗಳೂರು: ಕೊರೋನಾಗೆ ವ್ಯಾಕ್ಸಿನ್ ನೀಡಿಕೆ ವಿಚಾರದಲ್ಲಿ ಕರ್ನಾಟಕ, ತೆಲಂಗಾಣ ಮತ್ತು ಉತ್ತರ ಪ್ರದೇಶ ದೇಶದಲ್ಲೇ ಮುಂಚೂಣಿಯಲ್ಲಿರುವ ರಾಜ್ಯಗಳಾಗಿವೆ.
ಆರೋಗ್ಯ ಕಾರ್ಯಕರ್ತರಿಗೆ ಮೊದಲನೆಯ ಹಂತದ ಲಸಿಕೆ ನೀಡಲಾಗಿದ್ದು, ಈ ಪೈಕಿ ಎರಡನೇ ಹಂತದ ಡೋಸ್ ನೀಡುವಲ್ಲಿ ಕರ್ನಾಟಕ ದೇಶಕ್ಕೇ ನಂ.1 ಆಗಿದೆ. ಕರ್ನಾಟಕದಲ್ಲಿ ಇದುವರೆಗೆ 1.11 ಲಕ್ಷ ಆರೋಗ್ಯ ಕಾರ್ಯಕರ್ತರು ಲಸಿಕೆ ಸ್ವೀಕರಿಸಿದ್ದಾರೆ. ತೆಲಂಗಾಣದಲ್ಲಿ 86,648 ಮತ್ತು ಉತ್ತರ ಪ್ರದೇಶದಲ್ಲಿ 85,752 ಆರೋಗ್ಯ ಕಾರ್ಯಕರ್ತರು ಲಸಿಕೆ ಸ್ವೀಕರಿಸಿರುವುದಾಗಿ ಅಂಕಿ ಅಂಶ ಬಹಿರಂಗಪಡಿಸಿದೆ.