ಶಾಲೆ ಆರಂಭಿಸಲು ರಾಜ್ಯಗಳ ಸಲಹೆ ಕೇಳಿದ ಕೇಂದ್ರ

ಸೋಮವಾರ, 1 ಜೂನ್ 2020 (11:05 IST)
ನವದೆಹಲಿ: ಕೊರೋನಾದಿಂದಾಗಿ ಈ ವರ್ಷದ ಶಾಲೆ ಇನ್ನೂ ಆರಂಭವಾಗಿಲ್ಲ. ಶಾಲೆ ಯಾವಾಗ ಆರಂಭಿಸಿದರೆ ಸೂಕ್ತ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.


ಈ ನಡುವೆ ಕೇಂದ್ರ ಗೃಹ ಸಚಿವಾಲಯ ಶಾಲೆ ಆರಂಭಿಸುವ ಬಗ್ಗೆ ಅಭಿಪ್ರಾಯ ನೀಡುವಂತೆ ರಾಜ್ಯಗಳಿಗೆ ಸೂಚನೆ ನೀಡಿದೆ. ಶಾಲೆ ಆಡಳಿತ ಮಂಡಳಿ, ಪೋಷಕರ ಅಭಿಪ್ರಾಯ ಸಂಗ್ರಹಿಸಿ ಸಲಹೆ ನೀಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ.

ಕೆಲವು ಮೂಲಗಳ ಪ್ರಕಾರ ಜುಲೈನಲ್ಲಿ ಶಾಲೆ ಆರಂಭಿಸಲು ಒಪ್ಪಿಗೆ ಸಿಗಬಹುದು ಎನ್ನಲಾಗಿದೆ. ಹಾಗಿದ್ದರೂ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಬಗ್ಗೆ ಧೈರ್ಯ ಮಾಡುತ್ತಿಲ್ಲ. ಹೀಗಾಗಿ ರಾಜ್ಯಗಳ ಅಭಿಪ್ರಾಯ ಕೇಳಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ