ನವದೆಹಲಿ: ಕೊರೋನಾ ಕಾರಣದಿಂದ ದೇಶದೆಲ್ಲೆಡೆ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಎಲ್ಲಾ ರಾಜ್ಯ ಸರ್ಕಾರಗಳು ಫರ್ಮಾನು ಹೊರಡಿಸಿವೆ. ಆದರೆ ಜಾರ್ಖಂಡ್ ರಾಜ್ಯ ಈ ವಿಚಾರದಲ್ಲಿ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿದೆ.
ಮಾಸ್ಕ್ ಧರಿಸದೇ ಸಾರ್ವಜನಿಕ ಪ್ರದೇಶಗಳಲ್ಲಿ ಓಡಾಡಿದರೆ 1 ಲಕ್ಷ ರೂ. ದಂಡ ಮತ್ತು ಗರಿಷ್ಠ ಎರಡು ವರ್ಷ ಜೈಲು ಶಿಕ್ಷೆ ವಿಧಿಸುವ ಹೊಸ ನಿಯಮವೊಂದನ್ನು ಜಾರ್ಖಂಡ್ ಸರ್ಕಾರ ಜಾರಿಗೆ ತಂದಿದೆ.
ರಾಜ್ಯದಲ್ಲಿ ಇದುವರೆಗೆ 6,682 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ ಈ ಪೈಕಿ 64 ಮಂದಿ ಸಾವನ್ನಪ್ಪಿದ್ದಾರೆ. ಹೀಗಾಗಿ ಸರ್ಕಾರ ಇಂತಹ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.