ವಿದೇಶಗಳಲ್ಲೂ ಈಗ ಮತ್ತೊಮ್ಮೆ ಲಾಕ್ ಡೌನ್

ಶನಿವಾರ, 18 ಜುಲೈ 2020 (08:48 IST)
ನವದೆಹಲಿ: ನಮ್ಮ ದೇಶದ ಕೆಲವು ಕಡೆ ಕೊರೋನಾ ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಲಾಗುತ್ತಿದೆ. ಇದು ಹಲವರ ಅಸಮಾಧಾನಕ್ಕೆ ಗುರಿಯಾಗಿರಬಹುದು. ಆದರೆ ಈ ರೀತಿ ಮತ್ತೊಂದು ಸುತ್ತಿನ ಲಾಕ್ ಡೌನ್ ಈಗ ಕೆಲವು ವಿದೇಶಗಳಲ್ಲೂ ನಡೆಯುತ್ತಿದೆ.


ಆಸ್ಟ್ರೇಲಿಯಾ, ಜಪಾನ್, ಹಾಂಕಾಂಗ್ ಮುಂತಾದ ದೇಶಗಳ ಕೆಲವೆಡೆ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಸಾರಿಗೆ, ಜನರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಈ ದೇಶಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಭಾರತದಲ್ಲೂ ಕರ್ನಾಟಕ, ಮಹಾರಾಷ್ಟ್ರ, ತಮಿಳು ನಾಡು ಅತ್ಯಂತ ಶೋಚನೀಯ ಸ್ಥಾನದಲ್ಲಿದೆ. ಇದೀಗ ಕೇರಳದಲ್ಲೂ ದಿನೇ ದಿನೇ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕ್ಕೆಡೆಮಾಡಿಕೊಟ್ಟಿದೆ. ಹೀಗಾಗಿ ಅನಿವಾರ್ಯವಾಗಿ ಲಾಕ್ ಡೌನ್ ಮಾಡಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ