ಪಠ್ಯ ಕಡಿತ ಮಾಡುವ ಬಗ್ಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದೇನು?

ಶನಿವಾರ, 11 ಸೆಪ್ಟಂಬರ್ 2021 (10:04 IST)
ಶಿವಮೊಗ್ಗ : ರಾಜ್ಯದ ಶಾಲೆಗಳಲ್ಲಿ ಈ ವರ್ಷವೂ ಪಠ್ಯ ಕಡಿತದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಈ ವರ್ಷವೂ ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಆ ಬಗ್ಗೆ ಇನ್ನು ಯಾವ ನಿರ್ಣಯ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ರಜೆ ಕಡಿಮೆ ಮಾಡಿ ಸಿಲೆಬಸ್ ಪೂರ್ಣಗೊಳಿಸುವ ಕುರಿತು ಯೋಚನೆಯಿದೆ. ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಶಿಕ್ಷಕರ ಸಹಕಾರ ನೋಡಿ, ಅವಶ್ಯಕತೆ ಬಿದ್ದರೆ ನಿರ್ಣಯ ಕೈಗೊಳ್ಳುತ್ತೇವೆ. ಪಠ್ಯ ಕಡಿತಗೊಳಿಸುವ ಬಗ್ಗೆ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಬ್ರಿಡ್ಜ್ ಕೋರ್ಸ್ ಮಾಡುತ್ತಿದ್ದೇವೆ. ಸಿಲಬಸ್ ಪೂರ್ತಿ ಮಾಡಿದರೆ ಮಕ್ಕಳಿಗೆ ಲಾಭ. ಮಕ್ಕಳು ಒಂದೂವರೆ ವರ್ಷ ಶಾಲೆಯಿಂದ ದೂರ ಉಳಿದಿದ್ದಾರೆ. ಅದನ್ನು ಬ್ರಿಡ್ಜ್ ಕೋರ್ಸ್ ನಲ್ಲಿ ಪೂರ್ಣಗೊಳಿಸಬೇಕಿದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ