ಭಾರತ ತಂಡಕ್ಕೆ ಅಜಿಂಕ್ಯ ರೆಹಾನೆ ನಾಯಕ

ಶನಿವಾರ, 25 ಮಾರ್ಚ್ 2017 (09:00 IST)
ಧರ್ಮಶಾಲ: ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಟೆಸ್ಟ್ ತಂಡದಲ್ಲಿ ಟೀಂ ಇಂಡಿಯಾದ ನಾಯಕನಾಗಿ ಅಜಿಂಕ್ಯಾ ರೆಹಾನೆ ಕಣಕ್ಕಿಳಿಯುತ್ತಿದ್ದಾರೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

 

ಆಸ್ಟ್ರೇಲಿಯಾ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲ. ಆದರೆ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಸ್ಥಾನದಲ್ಲಿ ಕುಲ್ ದೀಪ್ ಯಾದವ್ ಮತ್ತು ಇಶಾಂತ್ ಶರ್ಮಾ ಸ್ಥಾನದಲ್ಲಿ ಭುವನೇಶ್ವರ್ ಕುಮಾರ್ ಆಡಲಿದ್ದಾರೆ.

 
ಇದರೊಂದಿಗೆ ಭುಜದ ನೋವಿನಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಆಡುತ್ತಾರೋ ಇಲ್ಲವೋ ಎಂಬ ಅನುಮಾನಗಳಿಗೆ ತೆರೆ ಎಳೆದಂತಾಗಿದೆ. ಕೊಹ್ಲಿ ಇಲ್ಲದೆ ಒತ್ತಡಗಳಿದ್ದರೂ, ಚೆನ್ನಾಗಿ ತಯಾರಿ ನಡೆಸಿದ್ದೇವೆ. ಉತ್ತಮವಾಗಿ ಆಡುತ್ತೇವೆ ಎಂದು ರೆಹಾನೆ ಹೇಳಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ