ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಇದೇ ಕಾರಣಕ್ಕೆ

Krishnaveni K

ಶನಿವಾರ, 4 ಅಕ್ಟೋಬರ್ 2025 (18:42 IST)
ಮುಂಬೈ: ಟೀಂ ಇಂಡಿಯಾ ಏಕದಿನ ನಾಯಕತ್ವದಿಂದ ರೋಹಿತ್ ಶರ್ಮಾಗೆ ಕೊಕ್ ನೀಡಿದ್ದು ಯಾಕೆ ಎಂದು ಇಂದು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟಿಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅಜಿತ್ ಅಗರ್ಕರ್, ರೋಹಿತ್ ಶರ್ಮಾ ಬದಲು ಶುಭಮನ್ ಗಿಲ್ ರನ್ನು ಏಕದಿನ ತಂಡದ ನಾಯಕರಾಗಿ ಆಯ್ಕೆ ಮಾಡಿದ್ದು ಯಾಕೆ ಎಂದು ಬಹಿರಂಗಪಡಿಸಿದ್ದಾರೆ.

ಇಂದು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಏಕದಿನ ಸರಣಿಗೆ ತಂಡವನ್ನು ಆಯ್ಕೆ ಮಾಡಲಾಗಿದ್ದು ಶುಭಮನ್ ಗಿಲ್ ನಾಯಕರಾಗಿದ್ದಾರೆ. ರೋಹಿತ್ ಶರ್ಮಾ ಕೇವಲ ಆಟಗಾರನಾಗಿ ತಂಡದಲ್ಲಿ ಮುಂದುವರಿಯಲಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಜಿತ್ ಅಗರ್ಕರ್, ‘2027 ರ ಏಕದಿನ ವಿಶ್ವಕಪ್ ಗೆ ತಂಡವನ್ನು ಸಿದ್ಧ ಮಾಡುವ ಉದ್ದೇಶದಿಂದ ರೋಹಿತ್ ಗೆ ನಾಯಕತ್ವದಿಂದ ಕೊಕ್ ನೀಡಲಾಗಿದೆ. ನಾವೆಲ್ಲರೂ ಒಂದೇ ದೃಷ್ಟಿಕೋನವನ್ನು ಹೊಂದಿದ್ದೇವೆ. ನಮ್ಮೆಲ್ಲರ ಗುರಿ ಒಂದೇ’ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ