ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ನಿವೃತ್ತಿ ವದಂತಿ ಬೆನ್ನಲ್ಲೇ ತಂಡದ ಆಟಗಾರನಿಂದ ಸ್ಪೋಟಕ ಮಾಹಿತಿ
ಆದರೆ, ವದಂತಿಯ ಕುರಿತು ತಂಡ ಉಪನಾಯಕ ಮತ್ತು ಆರಂಭಿಕ ಬ್ಯಾಟರ್ ಪ್ರತಿಕ್ರಿಯೆ ನೀಡಿದ್ದು, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರ ಭವಿಷ್ಯದ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ತಂಡದ ಡ್ರೆಸ್ಸಿಂಗ್ ಕೊಠಡಿಯಲ್ಲಿ ರೋಹಿತ್ ಹಾಗೂ ವಿರಾಟ್ ನಿವೃತ್ತಿ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೂ ಇಂದಿನ ಹೈವೋಲ್ಟೇಜ್ ಪಂದ್ಯ ಎಲ್ಲರ ಗಮನ ಸೆಳೆದಿದೆ.