ಏಷ್ಯಾ ಕಪ್: ಬಾಂಗ್ಲಾಗೆ ಟೀಂ ಇಂಡಿಯಾ ಆರಂಭಿಕ ಆಘಾತ

ಶುಕ್ರವಾರ, 15 ಸೆಪ್ಟಂಬರ್ 2023 (16:08 IST)
ಕೊಲೊಂಬೊ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಬಾಂಗ್ಲಾದೇಶ ವಿರುದ್ಧ ಔಪಚಾರಿಕ ಸೂಪರ್ ಫೋರ್ ಪಂದ್ಯವಾಡುತ್ತಿರುವ ಟೀಂ ಇಂಡಿಯಾ ಆರಂಭದಲ್ಲೇ 3 ವಿಕೆಟ್ ಕಿತ್ತು ಶುಭಾರಂಭ ಮಾಡಿದೆ.

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿರುವ ಟೀಂ ಇಂಡಿಯಾ ಎದುರಾಳಿಗಳಿಗೆ ಆರಂಭಿಕ ಆಘಾತ ನೀಡಿದೆ. ಇಂದು ಸಾಕಷ್ಟು ಬದಲಾವಣೆಗಳೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿದಿದೆ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ನಂತಹ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮ, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್ ಗೆ ಅವಕಾಶ ನೀಡಲಾಗಿದೆ.

ಇತ್ತೀಚೆಗಿನ ವರದಿ ಬಂದಾಗ ಬಾಂಗ್ಲಾ 13 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 58 ರನ್ ಗಳಿಸಿದೆ. ಅನುಭವಿ ಶಕೀಬ್ ಉಲ್ ಹಸನ್ 19 ಮತ್ತು ಮೆಹದಿ ಹಸನ್ 13 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಭಾರತದ ಪರ ಮೊಹಮ್ಮದ್ ಶಮಿ 1, ಶಾರ್ದೂಲ್ ಠಾಕೂರ್ 2 ವಿಕೆಟ್ ಕಬಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ