ದುಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಅಂತರರಾಷ್ಟ್ರೀಯ ಕ್ರೀಡಾಂಗಣ ಸಜ್ಜಾಗಿದೆ. ಏಪ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುವ ಎ ಗುಂಪಿನ ಪಂದ್ಯದಲ್ಲಿ ಭಾರತವೇ ಗೆಲ್ಲುವ ನೆಚ್ಚಿನ ತಂಡವಾಗಿದೆ.
ಭಾರತ ಮತ್ತು ಪಾಕ್ ನಡುವಿನ ಪಂದ್ಯಕ್ಕೆ ಸಾಕಷ್ಟು ವಿರೋಧವಿದ್ದರೂ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಆದರೆ, ಈ ಹಿಂದಿನ ದಾಖಲೆಯ ಪ್ರಕಾರ ಭಾರತವೇ ಪಾರಮ್ಯ ಸಾಧಿಸುವ ವಿಶ್ವಾಸದಲ್ಲಿದೆ.
ಪಾಕ್ ತಂಡದಲ್ಲಿ ಹೊಸಮುಖಗಳೇ ಅಧಿಕವಾಗಿದೆ. ಯುವ ಆಟಗಾರರ ಮೇಲೆ ಹೆಚ್ಚಿನ ವಿಶ್ವಾಸ ಇಟ್ಟುಕೊಟ್ಟಿದೆ.
ಸೈಮ್ ಅಯೂಬ್, ಹಸನ್ ನವಾಜ್, ಫಖರ್ ಜಮಾನ್, ಮೊಹಮ್ಮದ್ ಹಾರಿಸ್‌ರನ್ನು ಹೆಚ್ಚಾಗಿ ಅವಲಂಬಿಸಿದೆ.
ಭಾರತ-ಪಾಕಿಸ್ತಾನ ಏಷ್ಯಾಕಪ್(ಏಕದಿನ, ಟಿ20 ಸೇರಿ)ನಲ್ಲಿ 19 ಬಾರಿ ಮುಖಾಮುಖಿಯಾಗಿವೆ. 10ರಲ್ಲಿ ಭಾರತ, 6ರಲ್ಲಿ ಪಾಕಿಸ್ತಾನ ಗೆದ್ದಿದೆ. 3 ಪಂದ್ಯ ರದ್ದುಗೊಂಡಿವೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ತಾಜಾ ಪಿಚ್ ತಂಡಗಳನ್ನು ಸ್ವಾಗತಿಸಿದೆ. ಟಿ20 ಕ್ರಿಕೆಟ್‌ನಲ್ಲಿ ಭಾರತ ಮತ್ತು ಪಾಕ್ ಒಟ್ಟು 13 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಭಾರತ 9 ಬಾರಿ ಗೆದ್ದರೆ, ಮೂರು ಬಾರಿ ಪಾಕಿಸ್ತಾನ ಜಯಿಸಿದೆ. ಒಂದು ಪಂದ್ಯ ಟೈ ಆಗಿದೆ.