ಏಷ್ಯಾ ಕಪ್ ಕ್ರಿಕೆಟ್: ಟೀಂ ಇಂಡಿಯಾ ಈಗ ಗಾಯಾಳುಗಳ ಗೂಡು

ಶುಕ್ರವಾರ, 21 ಸೆಪ್ಟಂಬರ್ 2018 (10:19 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಈಗಾಗಲೇ ಸೂಪರ್ ಸಿಕ್ಸ್ ಹಂತಕ್ಕೇರಿರುವ ಟೀಂ ಇಂಡಿಯಾಕ್ಕೆ ಇಂದು ಬಾಂಗ್ಲಾದೇಶದ ವಿರುದ್ಧದ ಪಂದ್ಯ ಔಪಚಾರಿಕ ಪಂದ್ಯವಾಗಲಿದೆ.

ಇಂದು ಅಬುದಾಬಿಯ ಮೈದಾನದಲ್ಲಿ ಸಂಜೆ ನಡೆಯಲಿರುವ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಭಾರೀ ಬದಲಾವಣೆ ನಿರೀಕ್ಷಿಸಬಹುದು. ಈಗಾಗಲೇ ಹಾರ್ದಿಕ್ ಪಾಂಡ್ಯ, ಶ್ರಾದ್ಧೂಲ್ ಠಾಕೂರ್, ಅಕ್ಸರ್ ಪಟೇಲ್ ಗಾಯಾಳುಗಳಾಗಿ ತಂಡದಿಂದ ಹೊರಬಿದ್ದಿದ್ದಾರೆ.

ಹೀಗಾಗಿ ಟೀಂ ಇಂಡಿಯಾ ಕಳೆದ ಪಾಕ್ ವಿರುದ್ಧದ ಪಂದ್ಯದಲ್ಲಿ ಆಡಿದ ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆಯಿದೆ. ಕಳೆದ ಪಂದ್ಯದಲ್ಲಿ ಹಾರ್ದಿಕ್ ಆಡುವ ಬಳಗಕ್ಕೆ ಆಯ್ಕೆಯಾಗಿದ್ದರೂ ನಾಲ್ಕು ಓವರ್ ಎಸೆಯುವಷ್ಟರಲ್ಲಿ ಗಾಯಾಳುವಾಗಿ ಪೆವಿಲಿಯನ್ ಸೇರಿಕೊಂಡಿದ್ದರು. ಹೀಗಾಗಿ ಇವರ ಸ್ಥಾನಕ್ಕೆ ಇಂದು ಮನೀಶ್ ಪಾಂಡೆ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. ಸಂಜೆ 5 ಗಂಟೆಗೆ ಪಂದ್ಯ ನಡೆಯಲಿದ್ದು, ಬಾಂಗ್ಲಾ ವಿರುದ್ಧ ಗೆದ್ದು ಟೀಂ ಇಂಡಿಯಾ ಪ್ರತಿಷ್ಠೆ ಉಳಿಸಿಕೊಳ್ಳಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ