ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿವೆ.
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣವು ಹೈವೋಲ್ಟೇಜ್ ಪಂದ್ಯಕ್ಕೆ ಸಜ್ಜಾಗಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇಂದಿನ ಪಂದ್ಯಕ್ಕೆ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಫೈನಲ್ ಕದನಕ್ಕೆ ಅಲಭ್ಯರಾಗಿದ್ದಾರೆ. ಇವರ ಜಾಗಕ್ಕೆ ರಿಂಕು ಸಿಂಗ್ ಆಯ್ಕೆ ಆಗಿದ್ದಾರೆ. ಹಾಗೆಯೆ ಕಳೆದ ಸೂಪರ್ 4 ನಲ್ಲಿ ಶ್ರೀಲಂಕಾ ವಿರುದ್ಧ ವಿಶ್ರಾಂತಿ ಪಡೆದುಕೊಂಡಿದ್ದ ಜಸ್ಪ್ರಿತ್ ಬೂಮ್ರಾ ಕಮ್ಬ್ಯಾಕ್ ಮಾಡಿದ್ದಾರೆ. ಶಿವಂ ದುವೆ ಕೂಡ ತಂಡಕ್ಕೆ ಮರಳಿದ್ದಾರೆ. ಅರ್ಷದೀಪ್ ಹೊರಗುಳಿದಿದ್ದಾರೆ.