ಏಷ್ಯಾ ಕಪ್ ಸೂಪರ್ ಫೋರ್ ಹಂತದಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಗುರುವಾರ, 7 ಸೆಪ್ಟಂಬರ್ 2023 (08:40 IST)
ಕೊಲೊಂಬೋ: ಏಷ್ಯಾ ಕಪ್ ಕ್ರಿಕೆಟ್ ಸೂಪರ್ ಫೋರ್ ಹಂತದಲ್ಲಿ ಆಡಲಿರುವ ತಂಡಗಳು ಯಾವೆಲ್ಲಾ ಎಂದು ನಿರ್ಧಾರವಾಗಿದ್ದು, ವೇಳಾಪಟ್ಟಿ ಇಂತಿದೆ.

ಭಾರತ, ಶ್ರೀಲಂಕಾ, ಪಾಕಿಸ್ತಾನ, ಬಾಂಗ್ಲಾದೇಶ ತಂಡಗಳು ಸೂಪರ್ ಫೋರ್ ಹಂತ ಪ್ರವೇಶಿಸಿರುವ ತಂಡಗಳಾಗಿವೆ. ಈ ಪೈಕಿ ಎಲ್ಲಾ ತಂಡಗಳೂ ಪರಸ್ಪರ ಮುಖಾಮುಖಿಯಾಗಲಿವೆ.

ಟೀಂ ಇಂಡಿಯಾ ಸೂಪರ್ ಫೋರ್ ಹಂತದ ಮೊದಲ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಕೊಲೊಂಬೋದ ಪ್ರೇಮದಾಸ ಮೈದಾನದಲ್ಲಿ ಆಡಲಿದೆ. ಈ ಪಂದ್ಯ ಸೆಪ್ಟೆಂಬರ್ 10 ರಂದು ನಡೆಯುವುದು. ಎರಡನೇ ಪಂದ್ಯ ಸೆಪ್ಟೆಂಬರ್ 12 ರಂದು ಶ್ರೀಲಂಕಾ ವಿರುದ್ಧ ನಡೆಯುವುದು ಮತ್ತು ಮೂರನೇ ಪಂದ್ಯ ಸೆಪ್ಟೆಂಬರ್ 15 ರಂದು ಬಾಂಗ್ಲಾದೇಶ ವಿರುದ್ಧ ನಡೆಯಲಿದೆ.  ಸೂಪರ್ ಫೋರ್ ಹಂತದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಎರಡು ತಂಡಗಳು ಫೈನಲ್ ಪ್ರವೇಶಿಸಲಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ