ಏಷ್ಯನ್ ಗೇಮ್ಸ್ ಕ್ರಿಕೆಟ್: ಚಿನ್ನದ ಪದಕಕ್ಕಾಗಿ ಇಂದು ಭಾರತಕ್ಕೆ ಶ್ರೀಲಂಕಾ ಹೋರಾಟ

ಸೋಮವಾರ, 25 ಸೆಪ್ಟಂಬರ್ 2023 (08:50 IST)
ಹ್ಯಾಂಗ್ ಝೂ: ಏಷ್ಯನ್ ಗೇಮ್ಸ್ ನ ಮಹಿಳೆಯ ಕ್ರಿಕೆಟ್ ಫೈನಲ್ ನಲ್ಲಿ ಇಂದು ಭಾರತ ತಂಡ ಶ್ರೀಲಂಕಾವನ್ನು ಎದುರಿಸಲಿದೆ.

ಭಾರತ ನಿನ್ನೆ ಸೆಮಿಫೈನಲ್ ನಲ್ಲಿ ಬಾಂಗ್ಲಾದೇಶವನ್ನು 8 ವಿಕೆಟ್ ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿತ್ತು. ನಿನ್ನೆಯ ಪಂದ್ಯದಲ್ಲಿ ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಭಾರತ ಅತ್ಯುತ್ತಮ ಪ್ರದರ್ಶನ ನೀಡಿತ್ತು. ಆದರೆ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧನಾ ಫಾರ್ಮ್ ಕೊಂಚ ಚಿಂತೆಯ ವಿಷಯವಾಗಿದೆ. ಆದರೆ ಶಫಾಲಿ ವರ್ಮ, ಜೆಮಿಮಾ ರೊಡ್ರಿಗಸ್ ಅದ್ಭುತ ಫಾರ್ಮ್ ನಲ್ಲಿರುವುದು ಭಾರತಕ್ಕೆ ಪ್ಲಸ್ ಪಾಯಿಂಟ್. ಅಲ್ಲದೆ ನಾಯಕಿ ಹರ್ಮನ್ ಪ್ರೀತ್ ಕೌರ್ ಇಂದಿನ ಪಂದ್ಯಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ.

ಅತ್ತ ಶ್ರೀಲಂಕಾ ತಂಡ ಸೆಮಿಫೈನಲ್ ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಫೈನಲ್ ಪ್ರವೇಶಿಸಿತ್ತು. ಹಿಂದಿನ ದಾಖಲೆಗಳನ್ನು ಗಮನಿಸಿದರೆ ಭಾರತವೇ ಇಂದು ಗೆಲ್ಲುವ ಫೇವರಿಟ್ ಆಗಿದೆ. ಇಂದು ಭಾರತೀಯ ಕಾಲಮಾನ ಪ್ರಕಾರ ಮಧ‍್ಯಾಹ್ನ 11.30 ಕ್ಕೆ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ