ಏಕದಿನ ಸರಣಿ, ವಿಶ್ವಕಪ್ ಆಡಲು ಭಾರತಕ್ಕೆ ಬಂದಿಳಿದ ಆಸ್ಟ್ರೇಲಿಯಾ ಕ್ರಿಕೆಟ್ ತಂಡ

ಬುಧವಾರ, 20 ಸೆಪ್ಟಂಬರ್ 2023 (17:42 IST)
ಮುಂಬೈ: ಮುಂಬರುವ ಏಕದಿನ ಸರಣಿ ಮತ್ತು ವಿಶ್ವಕಪ್ ಕೂಟದಲ್ಲಿ ಭಾಗಿಯಾಗಲು ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಭಾರತಕ್ಕೆ ಬಂದಿಳಿದಿದೆ.

ಸೆಪ್ಟೆಂಬರ್ 22 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಇದಾದ ಬಳಿಕ ಐಸಿಸಿ ಏಕದಿನ ವಿಶ್ವಕಪ್ ಆರಂಭವಾಗುವುದು. ಇವೆರಡೂ ಕೂಟಗಳಲ್ಲಿ ಭಾಗಿಯಾಗಲು ಆಸ್ಟ್ರೇಲಿಯಾ ತಂಡ ಆಗಮಿಸಿದೆ.

ದ.ಆಫ್ರಿಕಾದಲ್ಲಿ ಏಕದಿನ ಸರಣಿ ಮುಗಿದ ಬಳಿಕ ನೇರವಾಗಿ ಅಲ್ಲಿಂದ ಆಸೀಸ್ ತಂಡ ಭಾರತಕ್ಕೆ ಬಂದಿದೆ. ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ ಸೇರಿದಂತೆ ಪ್ರಮುಖರು ಆಗಮಿಸಿದ್ದಾರೆ. ಏಕದಿನ ಸರಣಿಯ ಮೊದಲ ಪಂದ್ಯ ಸೆ.22 ರಂದು ಮೊಹಾಲಿಯಲ್ಲಿ ನಡೆಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ