ಬಾರ್ಡರ್-ಗವಾಸ್ಕರ್ ಟೆಸ್ಟ್: ಆಸ್ಟ್ರೇಲಿಯಾ ಉತ್ತಮ ಆರಂಭ

ಗುರುವಾರ, 9 ಮಾರ್ಚ್ 2023 (10:58 IST)
ಅಹಮ್ಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಆಸೀಸ್ ಉತ್ತಮ ಆರಂಭ ಪಡೆದಿದೆ.

ಇತ್ತೀಚೆಗಿನ ವರದಿ ಬಂದಾಗ ಟ್ರಾವಿಸ್ ಹೆಡ್ ವಿಕೆಟ್ ಕಳೆದುಕೊಂಡಿರುವ ಆಸೀಸ್ 1 ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿದೆ. ಟ್ರಾವಿಸ್ ಹೆಡ್ 32 ರನ್ ಗಳಿಸಿ ರವಿಚಂದ್ರನ್ ಅಶ್ವಿನ್ ಗೆ ವಿಕೆಟ್ ಒಪ್ಪಿಸಿದ್ದಾರೆ.

ಇದೀಗ 26 ರನ್ ಗಳಿಸಿರುವ ಉಸ್ಮಾನ್ ಖವಾಜ ಮತ್ತು 3 ರನ್ ಗಳಿಸಿರುವ ಮಾರ್ನಸ್ ಲಬುಶೇನ್ ಕ್ರೀಸ್ ನಲ್ಲಿದ್ದಾರೆ. ಬೆಳಗಿನ ಅವಧಿಯಲ್ಲಿ ಆಸೀಸ್ ಟೀಂ ಇಂಡಿಯಾ ಬೌಲರ್ ಗಳನ್ನು ಯಶಸ್ವಿಯಾಗಿ ಎದುರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ