ಭಾರತ-ಆಸ್ಟ್ರೇಲಿಯಾ: ಆಸ್ಟ್ರೇಲಿಯಾಗೆ ಆರಂಭಿಕ ಆಘಾತ ನೀಡಿದ ಟೀಂ ಇಂಡಿಯಾ

ಶುಕ್ರವಾರ, 18 ಡಿಸೆಂಬರ್ 2020 (11:45 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ದಿನದ ಊಟದ ವಿರಾಮದ ವೇಳೆಗೆ ಆಸ್ಟ್ರೇಲಿಯಾ ಎರಡು ವಿಕೆಟ್ ನಷ್ಟಕ್ಕೆ 35 ರನ್ ಗಳಿಸಿದೆ.


ಭಾರತ ಮೊದಲ ಇನಿಂಗ್ಸ್ ನಲ್ಲಿ 244 ಕ್ಕೆ ಆಲೌಟ್ ಆಗಿದೆ. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾಕ್ಕೆ ವೇಗಿ ಜಸ್ಪ್ರೀತ್ ಬುಮ್ರಾ ಆರಂಭದಲ್ಲೇ ಎರಡು ವಿಕೆಟ್ ಕಬಳಿಸಿ ಆಘಾತ ನೀಡಿದ್ದಾರೆ. ಆಸ್ಟ್ರೇಲಿಯಾ ಪರ ಮಾರ್ನಸ್ ಲಬುಶೇನ್ 16 ರನ್ ಗಳಿಸಿದ್ದು, ಸ್ಟೀವ್ ಸ್ಮಿತ್ 1 ರನ್ ಗಳೊಂದಿಗೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಆಸೀಸ್ ಇನ್ನೂ 209 ರನ್ ಗಳಿಂದ ಹಿನ್ನಡೆಯಲ್ಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ