ಬಾರ್ಡರ್-ಗವಾಸ್ಕರ್ ಟೆಸ್ಟ್: ಟಾಸ್ ಗೆದ್ದ ಆಸೀಸ್, ಭರತ್, ಸೂರ್ಯ ಪದಾರ್ಪಣೆ

ಗುರುವಾರ, 9 ಫೆಬ್ರವರಿ 2023 (09:10 IST)
Photo Courtesy: Twitter
ನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದ ಆಸೀಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಭಾರತದ ಪರ ಈ ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿ ಶ್ರೀಕರ್ ಭರತ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟಿಗನಾಗಿ ಸೂರ್ಯಕುಮಾರ್ ಯಾದವ್ ಪದಾರ್ಪಣೆ ಮಾಡುತ್ತಿದ್ದಾರೆ.  ಇನ್ ಫಾರ್ಮ್ ಬ್ಯಾಟಿಗ ಶುಬ್ಮನ್ ಗಿಲ್ ಸ್ಥಾನ ಕಳೆದುಕೊಂಡಿದ್ದು ಕೆ.ಎಲ್‍. ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಉಳಿದಂತೆ ತಂಡ ಇಂತಿದೆ.

ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೀಕರ್ ಭರತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜ, ಲಬುಶೇನ್, ಸ್ಟೀವ್ ಸ್ಮಿತ್, ಮ್ಯಾಟ್ ರೆನ್ಶೋ,ಪೀಟರ್ ಹ್ಯಾಂಡ್ಸ್ ಕೋಂಬ್, ಅಲೆಕ್ಸ್ ಕ್ಯಾರೀ (ವಿಕೆಟ್ ಕೀಪರ್), ಪ್ಯಾಟ್ ಕ್ಯುಮಿನ್ಸ್ (ನಾಯಕ), ನಥನ್ ಲಿಯೋನ್, ಟಾಡ್ ಮುರ್ಫಿ, ಸ್ಕಾಟ್ ಬೊಲ್ಯಾಂಡ್.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ