ಆಸ್ಟ್ರೇಲಿಯಾದ ವೇಗದ ಮಾಂತ್ರಿಕ ಮಿಚೆಲ್ ಸ್ಟಾರ್ಕ್‌ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

Sampriya

ಮಂಗಳವಾರ, 2 ಸೆಪ್ಟಂಬರ್ 2025 (14:42 IST)
Photo Credit X
ಸಿಡ್ನಿ: ಆಸ್ಟ್ರೇಲಿಯಾದ ವೇಗದ ಮಾಂತ್ರಿಕ ಮಿಚೆಲ್ ಸ್ಟಾರ್ಕ್ ಮಂಗಳವಾರ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 

ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ಮುನ್ನ ಅವರ ಈ ಮಹತ್ವದ ನಿರ್ಧಾರ ಹೊರಬಿದ್ದಿದೆ. ತಮ್ಮ ಟೆಸ್ಟ್ ಮತ್ತು ಏಕದಿನ ವೃತ್ತಿಜೀವನದತ್ತ ಗಮನ ಹರಿಸಲು ಬಯಸಿರುವುದಾಗಿ ಹೇಳಿದ್ದಾರೆ.

ಸ್ಟಾರ್ಕ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 79 ವಿಕೆಟ್‌ಗಳನ್ನು ಗಳಿಸುವ ಮೂಲಕ ಆಡಮ್ ಜಂಪಾ ನಂತರ ಆಸ್ಟ್ರೇಲಿಯಾ ಪರ ಎರಡನೇ ಅತ್ಯಧಿಕ ವಿಕೆಟ್‌ಗಳನ್ನು ಗಳಿಸಿದ್ದಾರೆ.

ಭಾರತ ಟೆಸ್ಟ್ ಪ್ರವಾಸ, ಆಸ್ಟ್ರೇಲಿಯಾ ಮತ್ತು 2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗಾಗಿ ಎದುರು ನೋಡುತ್ತಿರುವ ನಾನು, ಆಟದಲ್ಲಿ ತಾಜಾತನ ಮತ್ತು ಫಿಟ್ ನೆಸ್ ಕಾಯ್ದುಕೊಳ್ಳಲು ಇದು ನನ್ನ ಉತ್ತಮ ಮಾರ್ಗ ಎಂದು ಭಾವಿಸುತ್ತೇನೆ ಎಂದು ಮಿಚೆಲ್ ಸ್ಟಾರ್ಕ್‌ ತಿಳಿಸಿದ್ದಾರೆ.

ಸದ್ಯ ನಾನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಆದರೆ, ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಮುಂದುವರೆಯುವೆ. ಟೆಸ್ಟ್ ಆಡುವುದು ನನ್ನ ಮೊದಲ ಆದ್ಯತೆಯಾಗಿದೆ ಸ್ಟಾರ್ಕ್‌ ಹೇಳಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ