ಐಸಿಸಿ ಮಾಸಿಕ ಪ್ರಶಸ್ತಿ ರೇಸ್ ನಲ್ಲಿ ಅಕ್ಸರ್ ಪಟೇಲ್

ಗುರುವಾರ, 6 ಅಕ್ಟೋಬರ್ 2022 (07:20 IST)
ದುಬೈ: ಸೆಪ್ಟೆಂಬರ್ ತಿಂಗಳ ಐಸಿಸಿ ಮಾಸಿಕ ಪ್ರಶಸ್ತಿಗೆ ಟೀಂ ಇಂಡಿಯಾ ಸ್ಪಿನ್ನರ್ ಅಕ್ಸರ್ ಪಟೇಲ್ ನಾಮನಿರ್ದೇಶನಗೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯಲ್ಲಿ ಹಾಗೂ ಏಷ್ಯಾ ಕಪ್ ಟೂರ್ನಿಯಲ್ಲಿ ಅಕ್ಸರ್ ಪ್ರದರ್ಶನ ಗಮನಾರ್ಹವಾಗಿತ್ತು. ಹೀಗಾಗಿ ಅವರು ಪ್ರಶಸ್ತಿ ರೇಸ್ ನಲ್ಲಿದ್ದಾರೆ.

ಅಕ್ಸರ್ ಜೊತೆಗೆ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್, ಆಸ್ಟ್ರೇಲಿಯಾದ ಕ್ಯಾಮರೂನ್ ಗ್ರೀನ್ ಕೂಡಾ ಪ್ರಶಸ್ತಿ ರೇಸ್ ನಲ್ಲಿದ್ದಾರೆ.
-Edited by Rajesh Patil

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ