ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಐತಿಹಾಸಿಕ ಹೊನಲು ಬೆಳಕಿನ ಟೆಸ್ಟ್ ಪಂದ್ಯ ಆರಂಭವಾಗಿದ್ದು ಟಾಸ್ ಸೋತ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಗಿಳಿದಿದೆ.
ಟಾಸ್ ಗೆದ್ದ ಬಾಂಗ್ಲಾ ಬ್ಯಾಟಿಂಗ್ ಆಯ್ದುಕೊಂಡಿದ್ದು ಈಗಷ್ಟೇ ಮೊದಲ ಇನಿಂಗ್ಸ್ ಆರಂಭಿಸಿದೆ. ಪಂದ್ಯ ಆರಂಭಕ್ಕೆ ಮೊದಲು ಈಡನ್ ಮೈದಾನದ ಗಂಟೆಯನ್ನು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಪ. ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಬಾರಿಸುವ ಮೂಲಕ ಪಂದ್ಯಕ್ಕೆ ಚಾಲನೆ ನೀಡಿದರು.
ಭಾರತ ಈ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ. ಆದರೆ ಬಾಂಗ್ಲಾ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.