:
ಮುಂಬೈ: ಕಳೆದ ನಾಲ್ಕು ವರ್ಷಗಳಿಂದ ಬಾಕಿಯಿದ್ದ ಬಿಸಿಸಿಐ ವಾರ್ಷಿಕ ಪ್ರಶಸ್ತಿಯನ್ನು ಹೈದರಾಬಾದ್ ನಲ್ಲಿ ಏಕಕಾಲಕ್ಕೆ ನಡೆಸಲಾಯಿತು.
ಈ ಪ್ರಶಸ್ತಿ ಸಮಾರಂಭಕ್ಕೆ ಪುರುಷ ಮತ್ತು ಮಹಿಳಾ ಕ್ರಿಕೆಟಿಗರು, ಮಾಜಿ ಕ್ರಿಕೆಟಿಗರು ಸೇರಿದಂತೆ ಕ್ರಿಕೆಟ್ ಲೋಕದ ಗಣ್ಯರೆಲ್ಲರೂ ಆಗಮಿಸಿದ್ದರು. ಮಾಜಿ ಆಟಗಾರ, ಕೋಚ್, ಕಾಮೆಂಟೇಟರ್ ರವಿಶಾಸ್ತ್ರಿ, ಮಾಜಿ ಕ್ರಿಕೆಟಿಗ ಫಾರುಖ್ ಎಂಜಿನಿಯರ್ ಗೆ ಜೀವಮಾನ ಶ್ರೇಷ್ಠ ಸಾಧನೆಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎರಡನೇ ಬಾರಿಗೆ ಶ್ರೇಷ್ಠ ಅಂತಾರಾಷ್ಟ್ರೀಯ ಆಟಗಾರ ಪ್ರಶಸ್ತಿಗೆ ಭಾಜನರಾದರು. ಮಹಿಳೆಯರ ಪೈಕಿ ಸ್ಮೃತಿ ಮಂಧನಾ, ದೀಪ್ತಿ ಶರ್ಮ ಶ್ರೇಷ್ಠ ಅಂತಾರಾಷ್ಟ್ರೀಯ ಆಟಗಾರ್ತಿ ಪ್ರಶಸ್ತಿ ಪಡೆದರು. ಪ್ರಶಸ್ತಿ ವಿಜೇತರ ವಿವರ ಇಲ್ಲಿದೆ.