ಅಮೆರಿಕದ ಫ್ಲೋರಿಡಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಎರಡು ಟಿ ಟ್ವೆಂಟಿ ಪಂದ್ಯಗಳಿಗೆ ಬಿಸಿಸಿಐ ಅನುಮೋದನೆ ನೀಡುವ ಮೂಲಕ ಮಹತ್ವದ ಕ್ರಮ ಕೈಗೊಂಡಿದೆ. ಮುಂಬೈನಲ್ಲಿ ನಡೆದ ಮಂಡಳಿಯ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಎರಡು ಪಂದ್ಯಗಳನ್ನು ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜನಲ್ ಪಾರ್ಕ್ ಮತ್ತು ಫೋರ್ಟ್ ಲಾಡರ್‌ಡೇಲ್‌ನಲ್ಲಿ ಆಗಸ್ಟ್ 27 ಮತ್ತು 28ರಂದು ಕ್ರಮವಾಗಿ ಆಡಲಾಗುತ್ತದೆ.