ಕೆಪಿಎಲ್ ಪಂದ್ಯಾವಳಿಯಲ್ಲೂ ವ್ಯಾಪಕ ಬೆಟ್ಟಿಂಗ್?!

ಶನಿವಾರ, 21 ಸೆಪ್ಟಂಬರ್ 2019 (10:22 IST)
ಬೆಂಗಳೂರು: ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದ ತನಿಖೆ ನಡೆಯುತ್ತಿರುವಾಗಲೇ ಇದೀಗ ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ನಲ್ಲೂ ಬೆಟ್ಟಿಂಗ್ ಆರೋಪ ಕೇಳಿಬಂದಿದೆ.


ಕೆಪಿಎಲ್ ಪಂದ್ಯಾವಳಿಗಳಲ್ಲಿ ಭಾರೀ ಪ್ರಮಾಣದ ಬೆಟ್ಟಿಂಗ್ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲಿಕ ಅಲಿ ಅಶ್ಪಾಕ್ ತಹ್ರಾ ಅವರನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ರಾಜ್ಯ ಕ್ರಿಕೆಟ್ ಸಂಸ್ಥೆಯ ಸಹಕಾರ ಕೋರಿದ್ದಾರೆ. ಇದೀಗ ಇತರೆ ತಂಡಗಳ ಮಾಲಿಕರನ್ನೂ ಪೊಲೀಸರು ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ