ಡಬ್ಲ್ಯುಟಿಸಿ ಫೈನಲ್ ನೇರಪ್ರಸಾರ ಎಲ್ಲಿ ವೀಕ್ಷಿಸಬಹುದು?

ಮಂಗಳವಾರ, 6 ಜೂನ್ 2023 (08:20 IST)
ಮುಂಬೈ: ಇಂಗ್ಲೆಂಡ್ ನ ಓವಲ್ ಮೈದಾನದಲ್ಲಿ ಜೂನ್ 7 ರಿಂದ ಆರಂಭವಾಗಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ.

ಭಾರತ-ಆಸ್ಟ್ರೇಲಿಯಾ ನಡುವೆ ಐಸಿಸಿ ಪ್ರಶಸ್ತಿಗಾಗಿ ಪೈಪೋಟಿ ನಡೆಯಲಿದೆ. ಇದು ಎರಡನೇ ಡಬ್ಲ್ಯುಟಿಸಿ ಫೈನಲ್ ಪಂದ್ಯವಾಗಿದ್ದು ಭಾರತ ಸತತ ಎರಡನೇ ಬಾರಿ ಫೈನಲ್ ಗೇರಿದೆ.

ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಅಪರಾಹ್ನ 3 ಗಂಟೆಗೆ ಆರಂಭವಾಗುತ್ತಿದೆ. ಭಾರತೀಯ ವೀಕ್ಷಕರು ಸ್ಟಾರ್ ಸ್ಪೋರ್ಟ್ಸ್ ಟಿವಿ ವಾಹಿನಿಗಳಲ್ಲಿ ಮತ್ತು ಡಿಸ್ನಿ ಹಾಟ್ ಸ್ಟಾರ್ ಆಪ್ ನಲ್ಲಿ ಪಂದ್ಯದ ನೇರ ಪ್ರಸಾರ  ವೀಕ್ಷಿಸಬಹುದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ