ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿ ಘೋಷಣೆ; ಫೆ.23ಕ್ಕೆ ಭಾರತ-ಪಾಕ್‌ ಹೈವೋಲ್ಟೇಜ್‌ ಹಣಾಹಣಿ

Sampriya

ಮಂಗಳವಾರ, 24 ಡಿಸೆಂಬರ್ 2024 (21:05 IST)
Photo Courtesy X
ನವದೆಹಲಿ: ಚಾಂಪಿಯನ್ಸ್ ಟ್ರೋಫಿ 2025 ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮಂಗಳವಾರ ಪ್ರಕಟಿಸಿದೆ.

ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತಿರುವ ಎಲೈಟ್ ಟೂರ್ನಿ ಫೆಬ್ರವರಿ 19 ರಂದು ಕರಾಚಿಯಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ.  

ಮಾರ್ಚ್ 9 ರಂದು ಫೈನಲ್ ಪಂದ್ಯ ನಡೆಯಲಿದೆ. ಭಾರತವು ಫೆಬ್ರವರಿ 20 ರಂದು ಬಾಂಗ್ಲಾದೇಶ ತಂಡದ ವಿರುದ್ಧ ಚಾಂಪಿಯನ್ಸ್ ಟ್ರೋಫಿಯ ತನ್ನ ಮೊದಲ ಪಂದ್ಯವನ್ನು ದುಬೈನಲ್ಲಿ ಆಡಲಿದೆ. ಭಾರತ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.

ಎಂಟು ಸ್ಪರ್ಧಾತ್ಮಕ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎ ಗುಂಪಿನಲ್ಲಿ ಪಾಕಿಸ್ತಾನ, ಭಾರತ, ನ್ಯೂಜಿಲೆಂಡ್, ಬಾಂಗ್ಲಾದೇಶ ತಂಡಗಳಿವೆ. ಬಿ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಇಂಗ್ಲೆಂಡ್ ಸೇರಿವೆ. ಭಾರತವು ಫೆಬ್ರವರಿ 23 ರಂದು ದುಬೈನಲ್ಲಿ ಪಾಕಿಸ್ತಾನ ವಿರುದ್ಧ ಸೆಣಸಲಿದೆ.  

ಎಂಟು ತಂಡಗಳ ಟೂರ್ನಿಯಲ್ಲಿ 15 ಪಂದ್ಯಗಳು ನಡೆಯಲಿದ್ದು, ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿವೆ ಎಂದು ಐಸಿಸಿ ತಿಳಿಸಿದೆ. ಪಾಕಿಸ್ತಾನದಲ್ಲಿ ರಾವಲ್ಪಿಂಡಿ, ಲಾಹೋರ್ ಮತ್ತು ಕರಾಚಿ ಪಂದ್ಯಾವಳಿಗಳು ನಡೆಯಲಿವೆ.

ಭಾರತ ಫೈನಲ್‌ಗೆ ಅರ್ಹತೆ ಪಡಯದೇ ಇದ್ದರೆ  ಪಂದ್ಯ ಮಾರ್ಚ್ 9ರಂದು ಲಾಹೋರ್‌ನಲ್ಲಿ ನಡೆಯಲಿದೆ. ಒಂದು ವೇಳೆ, ಅರ್ಹತೆ ಪಡೆದರೆ ದುಬೈನಲ್ಲಿ ಪಂದ್ಯ ಫೈನಲ್‌ ನಡೆಯಲಿದೆ. ಸೆಮಿಫೈನಲ್ ಮತ್ತು ಫೈನಲ್ ಎರಡೂ ಮೀಸಲು ದಿನಗಳನ್ನು ಹೊಂದಿರುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ