ಟಿ20 ಕ್ರಿಕೆಟ್ ನಲ್ಲಿ ಹೊಸ ಇತಿಹಾಸವನ್ನೇ ಬರೆದ ಕ್ರಿಸ್ ಗೇಲ್

ಮಂಗಳವಾರ, 13 ಜುಲೈ 2021 (10:10 IST)
ಸೈಂಟ್ ಲೂಸಿಯಾ: ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಟಿ20 ಕ್ರಿಕೆಟ್ ಸರಣಿಯ ಮೂರನೇ ಪಂದ್ಯದಲ್ಲಿ ವಿಂಡೀಸ್ ಹೊಡೆಬಡಿಯ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಹೊಸ ಇತಿಹಾಸವನ್ನೇ ಬರೆದಿದ್ದಾರೆ.

 

ಗೇಲ್ ಟಿ20 ಕ್ರಿಕೆಟ್ ನಲ್ಲಿ 14,000 ರನ್ ಗಳಿಸಿದ ಮೊದಲ ಆಟಗಾರ ಎಂಬ ವಿಶೇಷ ದಾಖಲೆಯನ್ನು ಮಾಡಿದ್ದಾರೆ. ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದ ಗೇಲ್ 38 ಎಸೆತಗಳಿಂದ 4 ಬೌಂಡರಿ, 7 ಸಿಕ್ಸರ್ ಗಳೊಂದಿಗೆ 67 ರನ್ ಚಚ್ಚಿದರು.

ಇದರೊಂದಿಗೆ ರಾಷ್ಟ್ರೀಯ ತಂಡದಲ್ಲಿ ಫಾರ್ಮ್ ಕೊರತೆ ಅನುಭವಿಸಿದ್ದ ಗೇಲ್ ಕಮ್ ಬ್ಯಾಕ್ ಮಾಡಿದರು. ಈ ಪಂದ್ಯವನ್ನು ವಿಂಡೀಸ್ 6 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ ವಿಂಡೀಸ್ ಸರಣಿ ಕೈ ವಶ ಮಾಡಿಕೊಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ