ಐಪಿಎಲ್ ನಡೆಸಲು ಭಾರತಕ್ಕೆ ಅನುಕೂಲ ಮಾಡಿಕೊಡುತ್ತಿರುವ ಕ್ರಿಕೆಟ್ ಆಸ್ಟ್ರೇಲಿಯಾ

ಶನಿವಾರ, 30 ಮೇ 2020 (09:09 IST)
ಸಿಡ್ನಿ: ಅಕ್ಟೋಬರ್ ನಲ್ಲಿ ಭಾರತದ ವಿರುದ್ಧ ಕ್ರಿಕೆಟ್ ಸರಣಿ ನಡೆಸಲು ಸಿದ್ಧವಾಗಿರುವ ಕ್ರಿಕೆಟ್ ಆಸ್ಟ್ರೇಲಿಯಾ ಅದೇ ಸಮಯಕ್ಕೆ ಟಿ20 ವಿಶ್ವಕಪ್ ಆಯೋಜಿಸುವುದು ಕಷ್ಟವೆನ್ನುತ್ತಿದೆ. ಈ ಮೂಲಕ ಭಾರತೀಯ ಕ್ರಿಕೆಟ್ ಮಂಡಳಿಗೆ ಐಪಿಎಲ್ ನಡೆಸಲು ಅನುಕೂಲ ಮಾಡಿಕೊಡುತ್ತಿದೆಯೇ ಎಂಬ ಅನುಮಾನ ಶುರುವಾಗಿದೆ.


ಅಕ್ಟೋಬರ್ ನಲ್ಲಿ ಟಿ20 ವಿಶ್ವಕಪ್ ನಡೆಸುವುದು ಕೊರೋನಾ ದೃಷ್ಟಿಯಿಂದ ಅಪಾಯಕಾರಿ ಎಂದು ಐಸಿಸಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದೆ ಎಂಬ ಸುದ್ದಿ ಹಬ್ಬಿದೆ. ಹೀಗಾದಲ್ಲಿ ಈ ಸಮಯದಲ್ಲಿ ಭಾರತದಲ್ಲಿ ಐಪಿಎಲ್ನ ನಡೆಸಲು ಬಿಸಿಸಿಐಗೆ ಅವಕಾಶ ಸಿಗಲಿದೆ.

ಈ ಮೂಲಕ ಪರೋಕ್ಷವಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಭಾರತಕ್ಕೆ ಅನುಕೂಲ ಮಾಡಿಕೊಡಲಿದೆ. ಐಪಿಎಲ್ ನಲ್ಲಿ ಅನೇಕ ಆಸ್ಟ್ರೇಲಿಯಾ ಕ್ರಿಕೆಟಿಗರೂ ಪಾಲ್ಗೊಳ್ಳುತ್ತಿದ್ದಾರೆ. ಶ್ರೀಮಂತ ಕ್ರಿಕೆಟ್ ಲೀಗ್ ನಡೆಯದೇ ಇದ್ದರೆ ಆಟಗಾರರಿಗೂ ಆರ್ಥಿಕವಾಗಿ ನಷ್ಟವಾಗಲಿದೆ. ಈ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಆಸ್ಟ್ರೇಲಿಯಾ ಈ ನಿರ್ಧಾರಕ್ಕೆ ಬಂದಿದೆ ಎಂದೇ ಹೇಳಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ