ಭಾರತೀಯ ಕ್ರಿಕೆಟಿಗರ ವಿರುದ್ಧ ಜನಾಂಗೀಯ ನಿಂದನೆ ಮಾಡುತ್ತಿರುವ ಆಸಿಸ್ ಅಭಿಮಾನಿಗಳಿಗೆ ತಕ್ಕ ಶಾಸ್ತಿ
ಮೊದಲ ಎರಡು ದಿನ ಭಾರತೀಯ ಕ್ರಿಕೆಟಿಗರು ಮತ್ತು ಅಭಿಮಾನಿಗಳ ವಿರುದ್ಧ ಆಸ್ಟ್ರೇಲಿಯಾ ಅಭಿಮಾನಿಗಳು ಜನಾಂಗೀಯ ನಿಂದನೆ ಮಾಡಿರುವ ವಿಡಿಯೋ ಸಾಕ್ಷ್ಯಗಳು ಈಗಾಗಲೇ ಕ್ರಿಕೆಟ್ ಆಸ್ಟ್ರೇಲಿಯಾ ಕೈ ಸೇರಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಭದ್ರತಾ ಅಧಿಕಾರಿಗಳು ಮತ್ತು ವಿಕ್ಟೋರಿಯಾ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಹೀಗಾಗಿ ಅಭಿಮಾನಿಗಳಿಗೆ ಎಚ್ಚರಿಕೆ ನೀಡಲಾಗಿದೆ.