ಜಾರ್ಖಂಡ್ ವಿಧಾನಸಭಾ ಚುನಾವಣೆಯ ರಾಯಭಾರಿಯಾಗಿ ಕ್ರಿಕೆಟ್‌ ದಿಗ್ಗಜ ಧೋನಿ

Sampriya

ಭಾನುವಾರ, 27 ಅಕ್ಟೋಬರ್ 2024 (11:38 IST)
Photo Courtesy X
ರಾಂಚಿ: ಮುಂದಿನ ತಿಂಗಳು ನಡೆಯುವ ಜಾರ್ಖಂಡ್ ವಿಧಾನಸಭಾ ಚುನಾವಣೆ ರಾಯಭಾರಿಯಾಗಿ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ, ಕ್ರಿಕೆಟ್‌ ದಿಗ್ಗಜ  ಮಹೇಂದ್ರ ಸಿಂಗ್ ಧೋನಿ ಅವರನ್ನು ಚುನಾವಣಾ ಆಯೋಗ ಆಯ್ಕೆ ಮಾಡಿದೆ.

ವಿಧಾನಸಭಾ ಚುನಾವಣೆಗೆ ಧೋನಿ ತಮ್ಮ ಫೋಟೋವನ್ನು ಬಳಸಲು ಧೋನಿ ಅವರರು ಚುನಾವಣಾ ಆಯೋಗಕ್ಕೆ ಒಪ್ಪಿಗೆ ನೀಡಿದ್ದಾರೆ. ಜೊತೆಗೆ ಇನ್ಯಾವುದೇ ವಿವರ ಬೇಕಾದಲ್ಲಿ ಅವರ ಒಪ್ಪಿಗೆಯ ಮೇರೆಗೆ ತೆಗೆದುಕೊಳ್ಳಲಾಗುವುದು ಎಂದು ಜಾರ್ಖಂಡ್‌ ಮುಖ್ಯ ಚುನಾವಣಾಧಿಕಾರಿ ಕೆ.ರವಿಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸ್ವೀಪ್‌ (ಸಿಸ್ಟಮ್ಯಾಟಿಕ್ ವೋಟರ್ಸ್ ಎಜುಕೇಶನ್ ಮತ್ತು ಎಲೆಕ್ಟೋರಲ್ ಪಾರ್ಟಿಸಿಪೇಷನ್) ಕಾರ್ಯಕ್ರಮದ ಅಡಿಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಧೋನಿ ಭಾಗಿಯಾಗಲಿದ್ದಾರೆ. ವಿಶೇಷವಾಗಿ ಮತದಾರರಲ್ಲಿ ಮತ ಚಲಾಯಿಸುವಂತೆ ಪ್ರೋತ್ಸಾಹಿಸುತ್ತಾರೆ ಎಂದು ಚುನಾವಣಾ ಆಯೋಗ ಆಶಿಸುತ್ತದೆ ಎಂದರು.

ನ.13 ರಂದು ಮೊದಲ ಹಂತದಲ್ಲಿ ಒಟ್ಟು 43 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈಗಾಗಲೇ ಶುಕ್ರವಾರ (ಅ.25ರಂದು) ನಾಮಪತ್ರ ಸಲ್ಲಿಕೆ ಪೂರ್ಣಗೊಂಡಿದೆ.

ನಾಮಪತ್ರ ಸಲ್ಲಿಸಿದವರ ಪೈಕಿ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಸರೈಕೆಲಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್ ಪಕ್ಷದ ಅಧ್ಯಕ್ಷ ಮತ್ತು ಜಾರ್ಖಂಡ್‌ನ ಮಾಜಿ ಉಪಮುಖ್ಯಮಂತ್ರಿ ಸುದೇಶ್ ಮಹತೋ ಅವರು ಸಿಲ್ಲಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ