ಏಕದಿನ ವಿಶ್ವಕಪ್ ಕ್ರಿಕೆಟ್: ಟಾಸ್ ಇಂಗ್ಲೆಂಡ್ ಪಾಲು, ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿದೆ?
ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಲಾಗಿತ್ತು. ಆದರೆ ರೋಹಿತ್ ಕಳೆದ ಪಂದ್ಯದಲ್ಲಿ ಆಡಿಸಿದ್ದ ತಂಡವನ್ನೇ ಕಣಕ್ಕಿಳಿಸಿದ್ದಾರೆ. ಹೀಗಾಗಿ ಅಶ್ವಿನ್ ಮತ್ತೆ ಬೆಂಚ್ ಕಾಯಿಸಬೇಕಾಗಿದ್ದು, ಸೂರ್ಯಕುಮಾರ್ ಯಾದವ್ ಗೆ ಇನ್ನೊಂದು ಅವಕಾಶ ಸಿಕ್ಕಿದೆ.
ಅತ್ತ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವೂ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವನ್ನೇ ಕಣಕ್ಕಿಳಿಸಿದೆ. ಕೆಲವೇ ನಿಮಿಷಗಳಲ್ಲಿ ಪಂದ್ಯ ಆರಂಭವಾಗಲಿದೆ.