ಏಕದಿನ ವಿಶ್ವಕಪ್: ಟಾಸ್ ಗೆದ್ದ ಟೀಂ ಇಂಡಿಯಾ

ಬುಧವಾರ, 15 ನವೆಂಬರ್ 2023 (13:55 IST)
ಮುಂಬೈ: ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಇಂದು ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ವಾಂಖೆಡೆ ಮೈದಾನದಲ್ಲಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡರೆ ಪಂದ್ಯದಲ್ಲಿ ಮೇಲುಗೈ ಸಾಧಿಸಿದಂತೆ ಎಂದು ಈಗಾಗಲೇ ಹೇಳಲಾಗಿದೆ. ಅದರಂತೇ ರೋಹಿತ್ ಇಂದು ಟಾಸ್ ಗೆದ್ದು ಶುಭಾರಂಭವನ್ನೇ ಮಾಡಿದ್ದಾರೆ.

ಈ ಪಂದ್ಯಕ್ಕೆ ಟೀಂ ಇಂಡಿಯಾ ಯಾವುದೇ ಬದಲಾವಣೆಯಿಲ್ಲದೇ ಕಣಕ್ಕಿಳಿದಿದೆ. ಅತ್ತ ನ್ಯೂಜಿಲೆಂಡ್ ಕೂಡಾ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ