ಕೊನೆಗೂ ಧೋನಿಗೆ ತೆರೆಯಿತು ಅವಕಾಶದ ಬಾಗಿಲು

ಸೋಮವಾರ, 24 ಡಿಸೆಂಬರ್ 2018 (17:45 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಮತ್ತು ಆಸ್ಟ್ರೇಲಿಯಾ ಒಳಗೊಂಡ ತ್ರಿಕೋನ ಏಕದಿನ ಸರಣಿಗೆ ಇಂದು ಬಿಸಿಸಿಐ ಟೀಂ ಇಂಡಿಯಾ ಆಯ್ಕೆ ಮಾಡಿದ್ದು, ಮತ್ತೆ ಹಿರಿಯ ವಿಕೆಟ್ ಕೀಪರ್ ಧೋನಿಗೆ ಅವಕಾಶ ನೀಡಿದೆ.


ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಧೋನಿಗೆ ವಿಶ್ರಾಂತಿ ನೀಡಲಾಗಿತ್ತು. ದೇಶೀಯ ಕ್ರಿಕೆಟ್ ನಲ್ಲೂ ಆಡದೇ ಇರುವುದರಿಂದ ಧೋನಿ ಬಹುಕಾಲದಿಂದ ಮೈದಾನಕ್ಕೇ ಇಳಿದಿಲ್ಲ.

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಮುಗಿದ ಬೆನ್ನಲ್ಲೇ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ನಡೆಯಲಿದ್ದು, ಇದಕ್ಕಾಗಿ ಇಂದು ತಂಡವನ್ನು ಘೋಷಿಸಲಾಗಿದೆ. ವಿಶೇಷವೆಂದರೆ ಪದೇ ಪದೇ ವಿಫಲರಾದರೂ ಕೆಎಲ್ ರಾಹುಲ್ ಮತ್ತೆ ಅವಕಾಶ ಪಡೆದಿದ್ದಾರೆ. ಉಳಿದಂತೆ ಶಿಖರ್ ಧವನ್, ಹಾರ್ದಿಕ್ ಪಾಂಡ್ಯ, ಅಂಬಟಿ ರಾಯುಡು ಪುನರಾಗಮನವಾಗಿದೆ.

ತಂಡಗಳು ಹೀಗಿವೆ:

ಟಿ20 ಸರಣಿ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್,  ಶಿಖರ್ ಧವನ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಕೇದಾರ್ ಜಾದವ್, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಕೃಣಾಲ್ ಪಾಂಡ್ಯ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ ಮತ್ತು ಖಲೀಲ್ ಅಹಮ್ಮದ್.

ತ್ರಿಕೋನ ಏಕದಿನ ಸರಣಿ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶಿಖರ್ ಧವನ್, ಅಂಬಟಿ ರಾಯುಡು, ದಿನೇಶ್ ಕಾರ್ತಿಕ್, ಕೇದಾರ್ ಜಾದವ್, ಎಂಎಸ್ ಧೋನಿ,ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್, ಮೊಹಮ್ಮದ್ ಶಮಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ