ಬೆಂಗಳೂರಿನ ಆಸ್ಪತ್ರೆಗೆ ದಾಖಲಾದರೇ ಗಂಗೂಲಿ? ನಿಜಾಂಶ ಬಯಲು
ಗಂಗೂಲಿ ಇತ್ತೀಚೆಗೆ ಹೃದಯಾಘಾತಕ್ಕೊಳಗಾಗಿದ್ದರು. ಅದಾದ ಬಳಿಕ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೊಳಗಾಗಿದ್ದರು. ಈ ಹಿನ್ನಲೆಯಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆಗೆ ಬೆಂಗಳೂರಿಗೆ ಬಂದಿದ್ದಾಗ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳಾಗಿತ್ತು.
ಈ ಬಗ್ಗೆ ನಾರಾಯಣ ಆಸ್ಪತ್ರೆ ಸ್ಪಷ್ಟನೆ ನೀಡಿದ್ದು, ಗಂಗೂಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದು ಸುಳ್ಳು ಸುದ್ದಿ. ಡಾ. ದೇವಿ ಪ್ರಸಾದ್ ಶೆಟ್ಟಿಯವರನ್ನು ಭೇಟಿಯಾಗಲು ಆಸ್ಪತ್ರೆಗೆ ಬಂದಿದ್ದರಷ್ಟೆ. ಸೋಮವಾರ ಗಂಗೂಲಿ 100 ಬೆಡ್ ಗಳ ಐಸಿಯು ಯೂನಿಟ್ ನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ನೀಡಿದೆ.