END vs IND Test: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ

Sampriya

ಬುಧವಾರ, 23 ಜುಲೈ 2025 (15:20 IST)
Photo Credit X
ನವದೆಹಲಿ: ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್‌ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಗೊಂಡಿದೆ. 

ಓಲ್ಡ್ ಟ್ರಾಫರ್ಡ್‌ನಲ್ಲಿ ಟಾಸ್ ಗೆದ್ದ ಬೆನ್ ಸ್ಟೋಕ್ಸ್ ಭಾರತ ವಿರುದ್ಧದ 4 ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ ಎಂದೂ ಕರೆಯಲ್ಪಡುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ ಭಾರತ 2-1 ಹಿನ್ನಡೆಯಲ್ಲಿದೆ. 

ನಿತೀಶ್ ಕುಮಾರ್ ರೆಡ್ಡಿ ಮತ್ತು ಮೂರನೇ ಟೆಸ್ಟ್ ಆಡಿದ ಆಕಾಶ್ ದೀಪ್ ಗಾಯಗೊಂಡಿರುವ ಕಾರಣ ಅವರ ಸ್ಥಾನಕ್ಕೆ ಹರಿಯಾಣದ ವೇಗಿ ಅಂಶುಲ್ ಕಾಂಬೋಜ್ ಮತ್ತು ಶಾರ್ದೂಲ್ ಠಾಕೂರ್ ಅವರ ಸ್ಥಾನ ಪಡೆದಿದ್ದಾರೆ. 

ಸರಣಿಯಲ್ಲಿ ಬ್ಯಾಟಿಂಗ್‌ನಲ್ಲಿ ವಿಫಲರಾದ ಕರುಣ್ ನಾಯರ್ ಬದಲು ಸಾಯಿ ಸುದರ್ಧನ್ ಅವರು ಮತ್ತೇ ಅವಕಾಶ ಪಡೆದಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ