ಅಂತಿಮ ಏಕದಿನದಲ್ಲಿ ಮತ್ತೆ ಟೀಂ ಇಂಡಿಯಾಗೆ ಚೇಸಿಂಗ್ ಭಾಗ್ಯ!

ಶುಕ್ರವಾರ, 16 ಫೆಬ್ರವರಿ 2018 (16:10 IST)
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಆರಿಸಿಕೊಂಡಿದೆ.
 

ಈಗಾಗಲೇ ಸರಣಿ ಗೆದ್ದಿರುವ ಟೀಂ ಇಂಡಿಯಾಕ್ಕೆ ಇದು ನಾಮಕಾಸ್ಥೆ ಪಂದ್ಯವಾದರೂ ಪ್ರಬಲ ತಂಡದೊಂದಿಗೇ ಕಣಕ್ಕಿಳಿದಿದೆ. ಈ ಪಂದ್ಯಕ್ಕೆ ಭಾರತ ತಂಡ ಏಕೈಕ ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.

ಭುವನೇಶ್ವರ್ ಕುಮಾರ್ ಬದಲಿಗೆ ಯುವ ಆಟಗಾರ ಶ್ರಾದ್ಧೂಲ್ ಠಾಕೂರ್ ಅವಕಾಶ ಪಡೆದಿದ್ದಾರೆ. ಇದರೊಂದಿಗೆ ಕನ್ನಡಿಗ ಮನೀಶ್ ಪಾಂಡೆಗೆ ಈ ಪಂದ್ಯದಲ್ಲಾದರೂ ಅವಕಾಶ ಸಿಗಬಹುದೆಂಬ ನಿರೀಕ್ಷೆ ಸುಳ್ಳಾಗಿದೆ.

ಆದರೆ ಅತ್ತ ಆಫ್ರಿಕಾ ನಾಲ್ಕು ಬದಲಾವಣೆ ಮಾಡಿಕೊಂಡಿದೆ. ಮೋರಿಸ್, ಇಮ್ರಾನ್ ತಾಹಿರ್, ಬೆಹರ್ ದೀನ್ ಮತ್ತು ಝೋಂಡೋ ತಂಡಕ್ಕೆ ಮರಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ