ಕನ್ನಡಿಗ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಗಾಗಿ ಬಿಸಿಸಿಐಗೇ ಪ್ರಶ್ನೆ ಮಾಡಿದ ಹರ್ಭಜನ್ ಸಿಂಗ್

ಶುಕ್ರವಾರ, 7 ಸೆಪ್ಟಂಬರ್ 2018 (09:18 IST)
ಮುಂಬೈ: ಮುಂಬರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಆಯ್ಕೆ ಮಾಡಲಾಗಿರುವ ಟೀಂ ಇಂಡಿಯಾದಲ್ಲಿ ಪ್ರತಿಭಾವಂತ ಕ್ರಿಕೆಟಿಗ ಕನ್ನಡಿಗ ಮಯಾಂಕ್ ಅಗರ್ವಾಲ್ ರನ್ನು ಆಯ್ಕೆ ಮಾಡದೇ ಇರುವುದಕ್ಕೆ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಕಿಡಿ ಕಾರಿದ್ದಾರೆ.

ಟ್ವಿಟರ್ ನಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಹರ್ಭಜನ್ ಸಿಂಗ್ ‘ಮಯಾಂಕ್ ಅಗರ್ವಾಲ್ ಎಲ್ಲಿ? ಅಷ್ಟೊಂದು ರನ್ ಮಾಡಿಯೂ ನನಗೆ ಅವರನ್ನು ತಂಡದಲ್ಲಿ ಕಾಣಿಸುತ್ತಿಲ್ಲ. ಒಬ್ಬೊಬ್ಬರಿಗೆ ಒಂದೊಂದು ನ್ಯಾಯನಾ?’ ಎಂದು ಕಿಡಿ ಕಾರಿದ್ದಾರೆ.

ದೇಶೀಯ ಕ್ರಿಕೆಟ್ ನಲ್ಲಿ ಸಾಕಷ್ಟು ರನ್ ಗಳಿಸಿಯೂ ಮಯಾಂಕ್ ಅಗರ್ವಾಲ್ ರನ್ನು ಇದುವರೆಗೆ ಟೀಂ ಇಂಡಿಯಾಕ್ಕೆ ಆಯ್ಕೆ ಮಾಡಲಾಗಿಲ್ಲ. ಮಯಾಂಕ್ ಗಿಂತ ಕಡಿಮೆ ಸಾಧನೆ ಮಾಡಿದವರೂ ತಂಡಕ್ಕೆ ಆಯ್ಕೆಯಾಗುತ್ತಿರುವಾಗ ಈ ಪ್ರತಿಭಾವಂತ ಬ್ಯಾಟ್ಸ್ ಮನ್ ಗೆ ಸ್ಥಾನ ನೀಡುತ್ತಿಲ್ಲ. ಇದೇ ಕಾರಣಕ್ಕೆ ಬಿಸಿಸಿಐ ಆಯ್ಕೆ ಪ್ರಕ್ರಿಯೆಯನ್ನೇ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ