ಸ್ಪರ್ಧಾತ್ಮಕ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಹರ್ಭಜನ್ ಸಿಂಗ್

ಶುಕ್ರವಾರ, 24 ಡಿಸೆಂಬರ್ 2021 (15:51 IST)
ಮುಂಬೈ: ಟೀಂ ಇಂಡಿಯಾ ಸ್ಪಿನ್ನರ್ ಹರ್ಭಜನ್ ಸಿಂಗ್ ಎಲ್ಲಾ ಮಾದರಿಯ ಸ್ಪರ್ಧಾತ್ಮಕ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

ಅಂತಾರಾಷ್ಟ್ರೀಯ, ಐಪಿಎಲ್ ಸೇರಿದಂತೆ ಎಲ್ಲಾ ಮಾದರಿಯ ಸ್ಪರ್ಧಾತ್ಮಕ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿರುವ ಭಜಿ, ನಿಮ್ಮೆಲ್ಲರ ಪ್ರೀತಿ, ಬೆಂಬಲಕ್ಕೆ ಧನ್ಯವಾದಗಳು ಎಂದಿದ್ದಾರೆ.

ಅನಿಲ್ ಕುಂಬ್ಳೆ ಬಳಿಕ ಟೀಂ ಇಂಡಿಯಾ ಕಂಡ ಅತ್ಯಂತ ಯಶಸ್ವೀ ಸ್ಪಿನ್ನರ್ ಆಗಿದ್ದ ಹರ್ಭಜನ್ ಸಿಂಗ್ 2001 ರ ಐತಿಹಾಸಿಕ ಕೋಲ್ಕೊತ್ತಾ ಟೆಸ್ಟ್ ಪಂದ್ಯದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ಒಟ್ಟು 103 ಟೆಸ್ಟ್ ಪಂದ್ಯವಾಡಿರುವ ಅವರು 417 ವಿಕೆಟ್ ಸಂಪಾದಿಸಿದ್ದರು. 2007 ರ ಟಿ20 ವಿಶ್ವಕಪ್ ಮತ್ತು 2011 ರ ಏಕದಿನ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. ಇದೀಗ 23 ವರ್ಷಗಳ ಸುದೀರ್ಘ ವೃತ್ತಿ ಬದುಕಿಗೆ ಗುಡ್ ಬೈ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ