ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆಡುತ್ತಿರುವ ಟೀಂ ಇಂಡಿಯಾಗೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ರೂಪದಲ್ಲಿ ಆಘಾತ ಸಿಕ್ಕಿದೆ.
ಹಾರ್ದಿಕ್ ಪಾಂಡ್ಯ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡುತ್ತಿರುವಾಗಲೇ ಬೆನ್ನು ನೋವಿಗೆ ಒಳಗಾಗಿ ಮೈದಾನದಲ್ಲೇ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಸ್ಟ್ರಚರ್ ನಲ್ಲಿ ಕರೆದೊಯ್ಯಲಾಯಿತು.
ಹೀಗಾಗಿ ಹಾರ್ದಿಕ್ ಪಾಂಡ್ಯ ಟೂರ್ನಿಯಿಂದ ಹೊರಬಿದ್ದಿದ್ದು ಅವರ ಜಾಗಕ್ಕೆ ದೀಪಕ್ ಚಹರ್ ಅವರಿಗೆ ಬುಲಾವ್ ನೀಡಲಾಗಿದೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಸ್ಥಾನದಲ್ಲಿ ಮನೀಶ್ ಪಾಂಡೆ ಫೀಲ್ಡಿಂಗ್ ಮಾಡಿದ್ದರು.
ಇವರಲ್ಲದೆ, ಶ್ರಾದ್ಧೂಲ್ ಠಾಕೂರ್, ಅಕ್ಸರ್ ಪಟೇಲ್ ಕೂಡಾ ಗಾಯಕ್ಕೆ ತುತ್ತಾಗಿದ್ದು, ಇವರ ಸ್ಥಾನಕ್ಕೆ ಹಿರಿಯ ಸ್ಪಿನ್ನರ್ ರವೀಂದ್ರ ಜಡೇಜಾ ಮತ್ತು ಸಿದ್ಧಾರ್ಥ್ ಕೌಲ್ ಗೆ ಸ್ಥಾನ ನೀಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.