ಚಿನ್ನಸ್ವಾಮಿಯಲ್ಲಿಂದು ಹೈವೋಲ್ಟೇಜ್‌ ಕದನ: ಆರ್‌ಸಿಬಿಗೆ ಸವಾಲಾಗುವುದೇ ಸಿಎಸ್‌ಕೆ?

Sampriya

ಭಾನುವಾರ, 5 ಏಪ್ರಿಲ್ 2026 (09:57 IST)
Photo Credit X
ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಇಂದು ಹಾಲಿ ಚಾಂಪಿಯನ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಐದು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.

ಆರ್‌ಸಿಬಿ ತಂಡವು ಈಗಾಗಲೇ ಮೊದಲ ಪಂದ್ಯ ಗೆದ್ದು ಶುಭಾರಂಭ ಕಂಡಿದ್ದರೆ, ಚೆನ್ನೈ ತಂಡ ಸತತ ಎರಡು ಪಂದ್ಯಗಳನ್ನು ಸೋತು ಕಳೆದ ಸೀಸನ್ ನಂತೆಯೇ ಈ ಬಾರಿಯೂ ನಿರಾಸೆ ಅನುಭವಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಪಂದ್ಯ ಜಿದ್ದಾಜಿದ್ದಿನಿಂದ ಕೂಡಿರುವ ನಿರೀಕ್ಷೆ ಇದೆ.  

ಬಲಾಬಲ ಲೆಕ್ಕ ಹಾಕಿದರೆ ಆರ್‌ಸಿಬಿ ಹೆಚ್ಚು ಬಲಿಷ್ಠವಾಗಿದೆ. ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ ಮತ್ತು ರಜತ್ ಪಾಟೀದಾರ್ ಉತ್ತಮ ಫಾರ್ಮ್ ನಲ್ಲಿದ್ದಾರೆ. ಬೌಲಿಂಗ್‌ನಲ್ಲಿ ಜೇಕಬ್‌ ಡಫಿ, ಭುವನೇಶ್ವರ್ ಕುಮಾರ್‌, ಕೃಣಾಲ್‌ ಪಾಂಡ್ಯ, ಸುಯಶ್‌ ಶರ್ಮಾ ಎದುರಾಳಿ ತಂಡವನ್ನು ಕಟ್ಟಿಹಾಕುವ ಸಾಮರ್ಥ್ಯ ಹೊಂದಿದ್ದಾರೆ. 

ಚೆನ್ನೈ ತಂಡದ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗವು ಕೊಂಡ ದುರ್ಬಲವಾಗಿದೆ. ರಾಜಸ್ಥಾನ ರಾಯಲ್ಸ್‌ ವಿರುದ್ಧ ಅಲ್ಬ ಮೊತ್ತಕ್ಕೆ ಕುಸಿದ ಚೆನ್ನೈ ತಂಡವು ಪಂಜಾಬ್‌ ಕಿಂಗ್ಸ್‌ ವಿರುದ್ಧ ದೊಡ್ಡ ಮೊತ್ತ ಕಲೆಹಾಕಿದರೂ ಅವರನ್ನು ಡಿಫೆಂಡ್‌ ಮಾಡುವಲ್ಲಿ ವಿಫಲವಾಗಿತ್ತು. 

ಭಾನುವಾರ ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌ ಮತ್ತು ಜಿಯೊ ಹಾಟ್‌ಸ್ಟಾರ್‌ನಲ್ಲಿ ನೇರಪ್ರಸಾರವಿದೆ.

   

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ