ಕ್ರೀಡಾಂಗಣದಲ್ಲಿರುವಾಗ ಶೇ.120 ರಷ್ಟು ಶ್ರೇಷ್ಠ ಪ್ರದರ್ಶನ ನೀಡಲು ಬಯಸುತ್ತೇನೆ: ವಿರಾಟ್
ಮಂಗಳವಾರ, 7 ಜೂನ್ 2016 (16:00 IST)
ಕ್ರೀಡಾಂಗಣದಲ್ಲಿರುವಾಗ ಶೇ.120 ರಷ್ಟು ಉತ್ತಮ ಪ್ರದರ್ಶನ ನೀಡಲು ಬಯಸುತ್ತೇನೆ ಎಂದು ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೊಹ್ಲಿ, ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಗೆ ಮರಳಿದಾಗ ನನ್ನ ಫಾರ್ಮ್ ಇದೇ ರೀತಿಯಾಗಿತ್ತೆ ಎನ್ನುವುದನ್ನು ಪರಿಶೀಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ನಾನು ಕ್ರಿಕೆಟ್ ಮೈದಾನದಲ್ಲಿರುವಾಗ ಅತ್ಯುತ್ತಮ ಪ್ರದರ್ಶನ ನೀಡಲು ಶ್ರಮಿಸುತ್ತೇನೆ. ಆದಾಗ್ಯೂ ಕೆಲವೊಂದು ಬಾರಿ ಫಲಿತಾಂಶ ನಮ್ಮ ಕೈಯಲ್ಲಿರುವುದಿಲ್ಲ ಎಂದು ಹೇಳಿದ್ದಾರೆ.
ಇತ್ತೀಚೆಗೆ ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ ನಾಲ್ಕು ಶತಕಗಳೊಂದಿಗೆ 943 ರನ್ ಗಳಿಸಿದ ಏಕೈಕ ಕ್ರಿಕೆಟಿಗ ಎನ್ನುವ ಗೌರವಕ್ಕೆ ಪಾತ್ರರಾಗಿದ್ದರು.
ಕೊಹ್ಲಿ ಸೇರಿದಂತೆ ಇತರ ಪ್ರಮುಖ ಆಟಗಾರರು ವಿಶ್ರಾಂತಿ ಪಡೆಯುತ್ತಿದ್ದು, ಧೋನಿ ಮಾತ್ರ ಜಿಂಬಾಬ್ವೆ ಪ್ರವಾಸದಲ್ಲಿದ್ದಾರೆ.