ಭಾರತ ಕ್ರಿಕೆಟ್ ತಂಡದ ಖ್ಯಾತ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿ ಪ್ರತಿಷ್ಠಿತ ಸರ್ ಗಾರಿಫೀಲ್ಡ್ ಸೊಬರ್ಸ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ವರ್ಷದ ಕ್ರಿಕೆಟಿಗ ಪ್ರಶಸ್ತಿ ಪಡೆದ ಅಶ್ವಿನ್, ರಾಹುಲ್ ದ್ರಾವಿಡ್(2004) ಮತ್ತು ಸಚಿನ್ ತೆಂಡೂಲ್ಕರ್(2010) ನಂತರ ಮೂರನೇ ಸ್ಥಾನ ಪಡೆದಿದ್ದಾರೆ.
ರವಿಚಂದ್ರನ್ ಅಶ್ವಿನ್, ಪ್ರಸಕ್ತ ವರ್ಷದ 12 ಟೆಸ್ಟ್ ಪಂದ್ಯಗಳಲ್ಲಿ 72 ವಿಕೆಟ್‌ಗಳನ್ನು ಕಬಳಿಸಿದ ಹಿನ್ನೆಲೆಯಲ್ಲಿ ಅವರನ್ನು ಐಸಿಸಿಯಿಂದ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ರವಿಚಂದ್ರನ್ ಅಶ್ವಿನ್ ಕೇವಲ ಬೌಲಿಂಗ್‌ನಲ್ಲಿ ಸಾಧನೆ ತೋರದೆ, ಬ್ಯಾಟಿಂಗ್‌ನಲ್ಲೂ ಉತ್ತಮ ಪ್ರದರ್ಶನ ತೋರಿ ಆಲ್‌ರೌಂಡರ್ ಕ್ರಿಕೆಟಿಗ ಎನ್ನುವ ಗೌರವಕ್ಕೆ ಪಾತ್ರರಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.