ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ಇದೇ ಮಾರ್ಚ್ 9ರಂದು ನಡೆಯಲಿದೆ. ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಮತ್ತು ಭಾರತ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಹೈವೋಲ್ಟೇಜ್ ಪಂದ್ಯದ ಎಲ್ಲಾ ಟಿಕೆಟ್‌ಗಳು ಕೇವಲ 40 ನಿಮಿಷಗಳಲ್ಲಿ ಮಾರಾಟವಾಗಿವೆ.
ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ರೋಚಕ ಫೈನಲ್ ಪಂದ್ಯಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ಪಂದ್ಯಕ್ಕಾಗಿ ಎರಡೂ ದೇಶಗಳ ಅಭಿಮಾನಿಗಳಲ್ಲಿ ಕಾಯುತ್ತಿದ್ದಾರೆ. ಸುಮಾರು 25000 ಆಸನ ಸಾಮರ್ಥ್ಯವನ್ನು ಹೊಂದಿರುವ ಕ್ರೀಡಾಂಗಣವು ಫೈನಲ್ ಪಂದ್ಯಕ್ಕಾಗಿ ಸಂಪೂರ್ಣವಾಗಿ ತುಂಬಿರಲಿದೆ.
ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ-ನ್ಯೂಜಿಲೆಂಡ್ ಫೈನಲ್ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ದುಬಾರಿ ಬೆಲೆಗೆ ಟಿಕೆಟ್‌ಗಳನ್ನು ಖರೀದಿಸಿದ್ದಾರೆ. ಸಾಮಾನ್ಯ ಪ್ರವೇಶ ಟಿಕೆಟ್ ಶುಲ್ಕಕ್ಕಾಗಿ ಕ್ರಿಕೆಟ್ ಅಭಿಮಾನಿಗಳು 250 ದಿರ್ಹಮ್‌ಗಳನ್ನು ಪಾವತಿಸಿದ್ದಾರೆ. ಅಂದರೆ ಭಾರತೀಯ ರೂಪಾಯಿ ಪ್ರಕಾರ ₹6 ಸಾವಿರ ನಿಗದಿಯಾಗಿದೆ. ವಿಶೇಷ ಸ್ಕೈ ಬಾಕ್ಸ್‌ಗಾಗಿ 12,000 ದಿರ್ಹಮ್‌ಗಳು ನಿಗದಿ ಮಾಡಲಾಗಿದೆ. ಅಂದರೆ ₹2.83 ಲಕ್ಷ ಪಾವತಿಸಿ ದುಬಾರಿ ಟಿಕೆಟ್ ಅನ್ನು ಖರೀದಿಸಿದ್ದಾರೆ.
ಫೈನಲ್ ಪಂದ್ಯಕ್ಕಾಗಿ ದುಬೈ ಕ್ರೀಡಾಂಗಣದ ಗೇಟ್‌ಗಳು ಸ್ಥಳೀಯ ಕಾಲಮಾನ ಪ್ರಕಾರ ಬೆಳಿಗ್ಗೆ 10 ಗಂಟೆಗೆ ತೆರೆಯಿವೆ. ಬಹುನಿರೀಕ್ಷಿತ ಫೈನಲ್ ಪಂದ್ಯ ಸ್ಥಳೀಯ ಸಮಯ ಮಧ್ಯಾಹ್ನ 1 ಗಂಟೆಗೆ ಮತ್ತು ಭಾರತೀಯ ಕಾಲಮಾನ ಮಧ್ಯಾಹ್ನ 2:30 ಕ್ಕೆ ಆರಂಭವಾಗಲಿದೆ. ಭಾರತ ತಂಡವು ಮೂರನೇ ಬಾರಿ ಪ್ರಶಸ್ತಿಯನ್ನು ಎದುರು ನೋಡುತ್ತಿದೆ.